ರಾಜ್ಯ ಸುದ್ದಿಗಳು
ಮುದ್ದೇಬಿಹಾಳ ಡಿ.7:
ರೈತರ ಸಮಸ್ಯೆಗಳ ಕುರಿತು ದೆಹಲಿಯ ಜಂತರ ಮಂತರನಲ್ಲಿ ಈಗಾಗಲೇ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಗೆ ಸರಕಾರದಿಂದ ಯಾವುದೇ ರೀತಿಯ ಸ್ಪಂದನೆಸಿಗದ ಕಾರಣ ಮಂಗಳವಾರ ದೇಶವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳ ಸಮೂಹದಲ್ಲಿ ಭಾರತ್ ಬಂದ್ ಕರೆ ನೀಡಿದ್ದು ಮುದ್ದೇಬಿಹಾಳ ತಾಲೂಕಿನಲ್ಲಿಯೂ ಬಂದ್ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಬಿರಾದಾರ, ಪುರಸಭೆ ಸದಸ್ಯರಾದ ವಿರೇಶ ಹಡಲಗೇರಿ ಹಾಗೂ ಮೆಹಬೂಬ ಗೊಳಸಂಗಿ ತಾಲೂಕಿನ ವಿವಿಧ ಸಂಘಟನೆಗಳಿಗೆ ಕರೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈಗಾಗಲೇ ಎಪಿಎಂಸಿ ಸೇರಿದಂತೆ ರೈತ ವಿರೋಧ ಕಾಯ್ದೆಗಳನ್ನು ಅನುಷ್ಠಾನಕ್ಕೆ ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ರೈತರ ಸಮಸ್ಯೆ ತಿಳಿದು ಬರುತ್ತಿಲ್ಲ. ಇದರಿಂದಲೇ ಅನ್ನದಾತ ರೈತರು ಬೀದಿಗಿಳಿದು ಹೋರಾಟ ಮಾಡುವ ದುಸ್ಥಿತಿ ಎದುರಾಗಿದೆ.
ರೈತರ ಹೋರಾಟಕ್ಕೆ ಮುದ್ದೇಬಿಹಾಳ ತಾಲೂಕಿನ ವಿವಿಧ ವ್ಯಪಾರಸ್ಥರೂ ಕೈಜೋಡಿದಿ ಬಂದ್ ಯಶಸ್ವಿಯಾಗುಸುವ ಮೂಲಕ ಸರಕಾರಕ್ಕೆ ಎಚ್ಚರಿಸುವ ಕೆಲಸ ಮಾಡಬೇಕು. ಅಲ್ಲದೇ ತಾಲೂಕಿನ ವಿವಿಧ ಸಂಘಟನೆಗಳೂ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Be the first to comment