ರಾಜ್ಯ ಸರ್ಕಾರದ ನೂತನ ಸಿಎಸ್ ಪಿ.ರವಿಕುಮಾರ್ ಅಧಿಕಾರ ಸ್ವೀಕಾರ

 

ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯ ಕಾರ್ಯದರ್ಶಿಯವರ ಕಾರ್ಯಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಮುಖ್ಯ ಕಾರ್ಯದರ್ಶಿ, ಟಿಎಂ ವಿಜಯ ಭಾಸ್ಕರ್ ಅವರು ಹೊಸದಾಗಿ ನೇಮಕವಾದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಪತ್ರ ನೀಡಿ ಸ್ವಾಗತಿಸಿದರು. ಇದಕ್ಕೂ ಮುನ್ನ ಸೇವಾನಿವೃತ್ತಿ ಹೊಂದುತ್ತಿರುವ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅವರಿಗೆ ಹಿರಿಯ ಐಎಎಸ್ ಅಧಿಕಾರಿಗಳು ಮಧ್ಯಾಹ್ನ ಸತ್ಕರಿಸಿ ಗೌರವಿಸಿದರು. 1984ರ ಬ್ಯಾಚ್‍ನ ಕರ್ನಾಟಕ ಕೇಡರ್‍ನ ಐಎಎಸ್ ಅಧಿಕಾರಿ, ಪಿ. ರವಿಕುಮಾರ್ ಇನ್ನು ಒಂದುವರೆ ವರ್ಷ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾಗಿ ಅಧಿಕಾರ ನಡೆಸಲಿದ್ದಾರೆ

Be the first to comment

Leave a Reply

Your email address will not be published.


*